
ಒಂದು ವಾರ ಬಿಡುಗಡೆ ಮುಂದೂಡಲ್ಪಟ್ಟಿದ್ದ ‘ಕ್ಯಾಲೆಂಡರ್’ ಈ ವಾರ (ಏಪ್ರಿಲ್ 10) ಬಿಡುಗಡೆ ಕಾಣುತ್ತಿದ್ದು, ಆದರ್ಶ್ ಗುಂಡುರಾಜ್ ಚಿತ್ರದ ಮುಖ್ಯ ಪಾತ್ರದಲ್ಲಿದ್ದಾರೆ.
ಈ ಹಿಂದೆ ಎರಡು ಸಿನಿಮಾಗಳಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದ ಆದರ್ಶ ಗುಂಡುರಾಜ್ ಈ ಚಿತ್ರದ ಮೂಲಕ ಅದೃಷ್ಟ ಪರೀಕ್ಷೆ ಮಾಡುತ್ತಿದ್ದಾರೆ.
ಮಹಿಳಾ ಪ್ರಧಾನ ಕಥಾ ಹಂದರ ಹೊಂದಿರುವ ಈ ಚಿತ್ರ ಈಗಾಗಲೇ ಟ್ರೈಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದಿದೆ. ನವೀನ್ ಶಕ್ತಿ ಇದರ ನಿರ್ದೇಶಕರು.
ಆದರ್ಶ ಗುಂಡುರಾಜ್ ನಿರ್ಮಾಣದ ಜೊತೆಗೆ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರದಲ್ಲಿ ಅವರ ಜೋಡಿಯಾಗಿ ನಿವಿಷ್ಕ ಪಾಟೀಲ್ ಹಾಗೂ ಸುಶ್ಮಿತಾ ನಟಿಸಿದ್ದಾರೆ. ಕನಸಿನ ರಾಣಿ ಮಾಲಾಶ್ರೀ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ರಮೇಶ್ ಇಂದಿರಾ, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಸುಚೇಂದ್ರ ಪ್ರಸಾದ್, ಚಂದ್ರಪ್ರಭ ಹಾಗೂ ಇತರರು ತಾರಾಬಳಗದಲ್ಲಿದ್ದಾರೆ.

ಸುನಾದ್ ಗೌತಮ್ ಸಂಗೀತ, ರಮೇಶ್ ಕೊಯಿರಾ ಛಾಯಾಗ್ರಹಣ, ವಿಕ್ರಂ ಮೋರ್ ಸಾಹಸ ನಿರ್ದೇಶನ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ ಹಾಗೂ ಮಹಾಂತೇಶ್ ಆರ್ ಸಹ ನಿರ್ದೇಶನ ಚಿತ್ರಕ್ಕಿದೆ.
















