ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

* ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ* * ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಮುಖ್ಯಮಂತ್ರಿ * * ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರ ಅಗತ್ಯ; ಪತ್ರಿಕಾ ಮತ್ತು ಮಾಧ್ಯಮ ಸಂಘಟನೆಗಳ ಹೊಣೆಗಾರಿಕೆಯೂ ಮುಖ್ಯ ಸಿ.ಎಂ.ಸಿದ್ದರಾಮಯ್ಯ ಕರೆ * ಸುಳ್ಳುಸುದ್ದಿಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತವೆ. ಹಾಗಾಗಿ ಈ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಅದರಲ್ಲಿಯೂ ಪತ್ರಿಕಾ ಮತ್ತು…

Share :

* ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ*

* ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಮುಖ್ಯಮಂತ್ರಿ *

* ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರ ಅಗತ್ಯ; ಪತ್ರಿಕಾ ಮತ್ತು ಮಾಧ್ಯಮ ಸಂಘಟನೆಗಳ ಹೊಣೆಗಾರಿಕೆಯೂ ಮುಖ್ಯ ಸಿ.ಎಂ.ಸಿದ್ದರಾಮಯ್ಯ ಕರೆ *

ಸುಳ್ಳುಸುದ್ದಿಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತವೆ. ಹಾಗಾಗಿ ಈ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಅದರಲ್ಲಿಯೂ ಪತ್ರಿಕಾ ಮತ್ತು ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಬಿ.ಪಿ.ಮಲ್ಲಪ್ಪ ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

Share :

About the Author

Leave a Reply

Your email address will not be published. Required fields are marked *

About our Editor

Snehapriya Nagaraj is one of the renowned film journalist with vast experience of more than 25 years in the field of film industry. Apart from being columist for many news publications he has also penned many novels. Nagaraj is honoured with many awards for his immense contribution in film media.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports