ದುರಂತ ನಡೆಯ ಬಾರದಿತ್ತು ಮುಖ್ಯಮಂತ್ರಿ ವಿಷಾದ..

ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕಾವೇರಿಯಲ್ಲಿ ಬುಧವಾರ ನಡೆದ ತುರ್ತು ಸುದ್ದಿಗೋಷ್ಠಿಯ ವಿವರ ಈ ಕೆಳಕಂಡಂತ್ತಿದೆ. * ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ.* * ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ಮೃತಪಟ್ಟವರ ಕುಟುಂಬದವರ ವಾರಸುದಾರರಿಗೆ ರೂ.10…

Share :

ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳ ಗೃಹಕಚೇರಿ ಕಾವೇರಿಯಲ್ಲಿ ಬುಧವಾರ ನಡೆದ ತುರ್ತು ಸುದ್ದಿಗೋಷ್ಠಿಯ ವಿವರ ಈ ಕೆಳಕಂಡಂತ್ತಿದೆ.

* ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ.*

* ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ಮೃತಪಟ್ಟವರ ಕುಟುಂಬದವರ ವಾರಸುದಾರರಿಗೆ ರೂ.10 ಲಕ್ಷ ಪರಿಹಾರ ಘೋಷಣೆ *

* ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.*

* ಈ ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿದೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.*

* ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು.*

* ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿರುವೆ ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯ ಬಾರದಾಗಿತ್ತು. ಸರ್ಕಾರ ಇದಕ್ಕಾಗಿ ಬಹಳ ದುಃಖ ವ್ಯಕ್ತಪಡಿಸುತ್ತದೆ *

* ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.

* ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು.

* ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ.

* ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ; ಅವರ ಕುಟುಂಬ ವರ್ಗ, ವಾರಸುದಾರ ರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು ಸಿದ್ದರಾಮಯ್ಯ..

* ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share :

About the Author

Leave a Reply

Your email address will not be published. Required fields are marked *

About our Editor

Snehapriya Nagaraj is one of the renowned film journalist with vast experience of more than 25 years in the field of film industry. Apart from being columist for many news publications he has also penned many novels. Nagaraj is honoured with many awards for his immense contribution in film media.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports